ಮಹಿಳಾ ಆರ್ಥಿಕ ಸಬಲೀಕರಣಕ್ಕೆ ಶ್ರಮಿಸಿದ ನಾಗಮಾರಪಳ್ಳಿ
ಸ್ವಸಹಾಯ ಗುಂಪುಗಳ ದಿನಾಚರಣೆ: ಸಚಿವ ಚವಾಣ್ ಹೇಳಿಕೆ
ಬೀದರ: ಡಾ| ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುವಂತೆ, ನಾಗಮಾರಪಳ್ಳಿ ಅವರ ಜನ್ಮದಿನವನ್ನು ಸ್ವಸಹಾಯ ಗುಂಪುಗಳ ದಿನವನ್ನಾಗಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.
ಡಿಸಿಸಿ ಬ್ಯಾಂಕ್, ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ವತಿಯಿಂದ ಮಾಜಿ ಸಚಿವ ದಿ| ಗುರುಪಾದಪ್ಪ ನಾಗಮಾರಪಳ್ಳಿ ಅವರ ಜನ್ಮದಿನದ ಪ್ರಯುಕ್ತ ನಗರದ ಡಿಸಿಸಿ ಬ್ಯಾಂಕ್ನಲ್ಲಿ ಸೋಮವಾರ ಆಯೋಜಿಸಿದ್ದ ಸ್ವಸಹಾಯ ಗುಂಪುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದಿ| ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಅವರು ಮಹಿಳಾ ಆರ್ಥಿಕ ಸಬಲೀಕರಣಕ್ಕೆ ಶ್ರಮಿಸಿದ್ದಾರೆ. ಡಿಸಿಸಿ ಬ್ಯಾಂಕ್ ಮೂಲಕ ಅವರು ಆರಂಭಿಸಿದ ಸ್ವಸಹಾಯ ಗುಂಪುಗಳು ವಿವಿಧ ಸ್ವ ಉದ್ಯೋಗಗಳ ಮೂಲಕ ಮಹಿಳೆಯರು ಆರ್ಥಿಕ ಅಭಿವೃದ್ಧಿ ಹೊಂದಲು ನೆರವಾಗಿವೆ. ನಾಗಮಾರಪಳ್ಳಿ ಅವರು ಸಚಿವ, ಶಾಸಕ, ಡಿಸಿಸಿ ಬ್ಯಾಂಕ್ ಹಾಗೂ ಎನ್ಎನ್ಎಸ್ಕೆ ಅಧ್ಯಕ್ಷರಾಗಿ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ಸುಮಾರು 25 ಸಾವಿರ ಜನರಿಗೆ ಉದ್ಯೋಗ ಒದಗಿಸಿದ್ದಾರೆ ಎಂದು ಸ್ಮರಿಸಿದರು.
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಬೀದರ್ ರಾಷ್ಟçದಲ್ಲೇ ಮೊದಲ ಸ್ಥಾನದಲ್ಲಿದೆ. ಡಿಸಿಸಿ ಬ್ಯಾಂಕ್ ಪಾತ್ರ ಪ್ರಮುಖವಾಗಿದೆ. ಜಿಲ್ಲೆಯನ್ನು ಪ್ರತಿ ಕ್ಷೇತ್ರದಲ್ಲೂ ನಂಬರ್ ಒನ್ ಮಾಡಬೇಕಿದೆ. ನನೆಗುದಿಗೆ ಬಿದ್ದ ಕಾರ್ಯಗಳನ್ನು ಆರಂಭಿಸಬೇಕಿದೆ. ಈಗಾಗಲೇ ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಚುರುಕುಗೊಳಿಸಬೇಕಿದೆ. ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ, ಕನ್ನಡ ಭವನ, ಎಂಜಿನಿಯರಿAಗ್ ಕಾಲೇಜು ಕಟ್ಟಡ, ಪತ್ರಿಕಾ ಭವನ, ಬೀದರ್- ನಾಂದೇಡ್ ರಸ್ತೆ, ಬೀದರ್- ನಾಂದೇಡ್ ರೈಲು ಮಾರ್ಗ, ನಾಗರಿಕ ವಿಮಾನ ಸೇವೆ ಆರಂಭಿಸಲು ಆದ್ಯತೆ ಕೊಡಲಾಗುವುದು ಎಂದು ಹೇಳಿದರು.
ಸಂಸದ ಭಗವಂತ ಖೂಬಾ ಮಾತನಾಡಿ, ಸ್ವಸಹಾಯ ಗುಂಪುಗಳ ಮೂಲಕ ಇಡೀ ರಾಜ್ಯವೇ ಬೀದರ್ನತ್ತ ತಿರುಗಿ ನೋಡುವಂತೆ ಮಾಡಿದವರು ದಿ| ಗುರುಪಾದಪ್ಪ ನಾಗಮಾರಪಳ್ಳಿ. ಡಿಸಿಸಿ ಬ್ಯಾಂಕ್ ಮೂಲಕ ಅವರು ರಚಿಸಿದ ಸ್ವಸಹಾಯ ಗುಂಪುಗಳಿAದ ಲಕ್ಷಾಂತರ ಮಹಿಳೆಯರಿಗೆ ಲಾಭವಾಗಿದೆ. ಮೂರೂವರೆ ದಶಕಗಳ ಕಾಲ ಡಿಸಿಸಿ ಬ್ಯಾಂಕ್ ಅನ್ನು ಮುನ್ನಡೆಸಿ ಆರ್ಥಿಕವಾಗಿ ಸದೃಢಗೊಳಿಸಿದ್ದರು. ಈಗ ಅವರ ಪುತ್ರ ಉಮಾಕಾಂತ ನಾಗಮಾರಪಳ್ಳಿ ಅವರೂ ಅವರದ್ದೇ ಮಾರ್ಗದಲ್ಲಿ ಸಾಗುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಮಾತನಾಡಿ, ಡಿಸಿಸಿ ಬ್ಯಾಂಕ್ ಸ್ವಸಹಾಯ ಸಂಘಗಳ ಮೂಲಕ ಜಿಲ್ಲೆಯಲ್ಲಿ ತಂದಿರುವ ಬದಲಾವಣೆ ಇಡೀ ದೇಶಕ್ಕೆ ಮಾದರಿಯಾಗಿದೆ. ದೇಶದ 200ಕ್ಕೂ ಹೆಚ್ಚು ಡಿಸಿಸಿ ಬ್ಯಾಂಕ್ಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಅಧಿಕಾರಿಗಳು ಕಿರು ಹಣಕಾಸು ವ್ಯವಸ್ಥೆ ಬಗ್ಗೆ ಅರಿಯಲು ಬೀದರ್ಗೆ ಭೇಟಿ ನೀಡಿದ್ದಾರೆ. ವಿದೇಶಿಗರೂ ಇಲ್ಲಿಗೆ ಬರುತ್ತಿದ್ದಾರೆ ಎಂದು ತಿಳಿಸಿದರು.
ಸಾಲ ಮನ್ನಾ, ಪ್ರಧಾನಮಂತ್ರಿ ಫಸಲ್ ಬಿಮಾ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸೇರಿದಂತೆ ರೈತರಿಗಾಗಿನ ಸರ್ಕಾರದ ಎಲ್ಲ ಯೋಜನೆಗಳನ್ನು ಡಿಸಿಸಿ ಬ್ಯಾಂಕ್ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದೆ. ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ಯಶಸ್ವಿಯಾಗಿ ತಲುಪಿಸುತ್ತಿದೆ. ನಾಗಮಾರಪಳ್ಳಿ ಸಹಕಾರ ಆಸ್ಪತ್ರೆ ಕಡಿಮೆ ವೆಚ್ಚದಲ್ಲಿ ರೈತರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುತ್ತಿದೆ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಭೀಮರಾವ್ ಪಾಟೀಲ, ಬಸವಕಲ್ಯಾಣ ಎಂಜಿನಿಯರಿAಗ್ ಕಾಲೇಜು ಕಾರ್ಯದರ್ಶಿ ಧನರಾಜ ತಾಳಂಪಳ್ಳಿ, ಉದ್ಯಮಿಗಳಾದ ಸಂತೋಷ ತಾಳಂಪಳ್ಳಿ, ಜಗದೀಶ ಖೂಬಾ, ಜಿ.ಪಂ ಸದಸ್ಯೆ ಶಕುಂತಲಾ ಬೆಲ್ದಾಳೆ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರಾಚಪ್ಪ ಪಾಟೀಲ, ವಿಜಯಕುಮಾರ ಎಸ್. ಪಾಟೀಲ ಗಾದಗಿ, ಬಸವರಾಜ ಹೆಬ್ಬಾಳೆ, ಜಗನ್ನಾಥ ರೆಡ್ಡಿ ಎಖ್ಖೆಳ್ಳಿ, ಪರಮೇಶ್ವರ ಮುಗಟೆ, ಸಂಜಯಸಿAಗ್ ಹಜಾರಿ, ಶರಣಪ್ಪ ಶಿವಪ್ಪ, ಮಹಮ್ಮದ್ ಸಲೀಮುದ್ದಿನ್, ಸಂಗಮೇಶ ಪಾಟೀಲ, ಬಸವರಾಜ ಜಿ., ಶಿವಶರಣಪ್ಪ ತಗಾರೆ, ಹಣಮಂತರಾವ್ ಪಾಟೀಲ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಮಹಾಜನ, ಪ್ರಧಾನ ವ್ಯವಸ್ಥಾಪಕರಾದ ವಿಠ್ಠಲರೆಡ್ಡಿ ಯಡಮಲ್ಲೆ, ಚನ್ನಬಸಯ್ಯ ಸ್ವಾಮಿ,ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ ಕಲ್ಯಾಣಿ, ಉಮಾದೇವಿ ಚಿಲ್ಲರ್ಗಿ, ಉಪ ಪ್ರಧಾನ ವ್ಯವಸ್ಥಾಪಕರಾದ ಪಂಢರಿರೆಡ್ಡಿ, ರಾಜಕುಮಾರ ಆಣದೂರೆ, ಸದಾಶಿವ ಪಾಟೀಲ, ಅನಿಲ ಪಾಟೀಲ, ಎನ್ಎಸ್ಎಸ್ಕೆ ನಿರ್ದೇಶಕ ಶಶಿಕುಮಾರ ಪಾಟೀಲ ಸಂಗಮ, ಝರೆಪ್ಪ ಮಮದಾಪುರ, ಭೀಮರಾವ್ ಪಾಟೀಲ ಡಿಗ್ಗಿ ಮೊದಲಾದವರು ಇದ್ದರು.
Date:11-11-2019
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…


















