Home ನಿಮ್ಮ ಜಿಲ್ಲೆ ಬೀದರ ಮಾಜಿ CM ಸಿದ್ದರಮಯ್ಯಾ ಬಿಜೆಪಿಗೆ ಬಂದರೆ ಸ್ವಾಗತ

ಮಾಜಿ CM ಸಿದ್ದರಮಯ್ಯಾ ಬಿಜೆಪಿಗೆ ಬಂದರೆ ಸ್ವಾಗತ

ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಹೇಳಿಕೆ

ಯಾದಗಿರಿ: ಮಾಜಿ ಮುಖ್ಯಮಂತ್ರಿ ಸಿದ್ದರಮಯ್ಯಾ ಬಿಜೆಪಿಗೆ ಬಂದರೆ ಸ್ವಾಗತಿಸುವುದಾಗಿ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಎಲ್ಲಿದೆ ಕಾಂಗ್ರೆಸ್? ಎಂದು ಪ್ರಶ್ನಿಸಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಒಂದು ವೇಳೆ ಬಿಜೆಪಿಗೆ ಬಂದ್ರೆ ಸ್ವಾಗತಿಸುವುದಾಗಿ ಹೇಳುದ್ದಾರೆ.

ಅಂಬಿಗರ ಚೌಡಯ್ಯ ನಿಗಮ ಮಂಡಳಿಯ ಹುದ್ದೆ ನೀಡಿರುವುದು ಖುಷಿಯಾಗಿದೆ.
ಕೋಲಿ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುವೆ.
ನಾನು ಕೋಲಿ ಸಮಾಜದ ಚೌಕಿಧಾರ, 100 ಕೋಟಿ ನಿಗಮಕ್ಕೆ ಸಿಎಂ ಕೊಡುತ್ತಾರೆ ಎಂದ ಅವರು, ಸರಕಾರದ ಖಜಾನೆ ಭರಪೂರ ಆಗಿದೆ. ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದು ತಿಳಿಸಿದ್ದಾರೆ.

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…