Home ನಿಮ್ಮ ಜಿಲ್ಲೆ ಕಲಬುರಗಿ ಮಾಜಿ ಸಚಿವ ವೈಜನಾಥ ಪಾಟೀಲ್ ಇನ್ನಿಲ್ಲ

ಮಾಜಿ ಸಚಿವ ವೈಜನಾಥ ಪಾಟೀಲ್ ಇನ್ನಿಲ್ಲ

Date:02-11-2019

 

ಕಲಬುರಗಿ: 371ಜೆ ವಿಧಿ ತಿದ್ದುಪಡಿ ಜಾರಿ ಹೋರಾಟಗಾರ ಹಾಗೂ ಮಾಜಿ ಸಚಿವರಾದ ವೈಜನಾಥ ಪಾಟೀಲ್ (82) ಇನ್ನಿಲ್ಲ.

ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ ಅವರು ಪಾಟೀಲರು ಶನಿವಾರ ಬೆಳಿಗ್ಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು. ಹೈದ್ರಾಬಾದ ಕರ್ನಾಟಕ ಭಾಗಕ್ಕೆ 371(ಜೆ) ವಿಧಿ ಜಾರಿಗಾಗಿ ಸುಮಾರು ಎರಡು ದಶಕಕ್ಕೂ ಅಧಿಕ ಅವಧಿ ವರೆಗೆ ಹೋರಾಟ ನಡೆಸಿದರು. ಅಲ್ಲದೆ, 371(ಜೆ) ಜಾರಿ ಆದ ನಂತರ ಕೂಡ ಸೂಕ್ತ ಪ್ರಮಾಣದಲ್ಲಿ ಈ ಭಾಗದ ಜನರಿಗೆ ನ್ಯಾಯ ನೀಡಬೇಕು ಎಂದು ಒತ್ತಾಯಿಸಿ ಪದೆಪದೆ ಸರ್ಕಾರಗಳಿಗೆ ಒತ್ತಾಯ ಮಾಡುತ್ತಿದ್ದರು.

ರಾಮಕೃಷ್ಣ ಹೆಗಡೆ ಸಂಪುಟದಲ್ಲಿ 1984ರಲ್ಲಿ ತೋಟಗಾರಿಕೆ ಹಾಗೂ ಎಚ್. ಡಿ. ದೇವೆಗೌಡ ಸಂಪುಟದಲ್ಲಿ 1994ರಲ್ಲಿ ನಗರಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಪಾಟೀಲರು, ಹೈದ್ರಾಬಾದ ಕರ್ನಾಟಕದ ವಿವಿಧ ಭೇಡಿಕೆಗಳ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೂಡ ನೀಡಿರುವುದು ಇಲ್ಲಿ ಸ್ಮರಿಸಬಹುದಾಗಿದೆ.

Check Also

ಜೂ.15 ರಂದು ಸಮಾಜ ಕಲ್ಯಾಣ ಸಚಿವ* *ಡಾ.ಹೆಚ್.ಸಿ.ಮಹಾದೇವಪ್ಪ ಅವರ ಬೀದರ ಜಿಲ್ಲಾ ಪ್ರವಾಸ

ಬೀದರ, ಜೂನ್.12: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು …