ಲಸಿಕೆ ಪಡೆದ ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗೆ ದಾಖಲು.
ಲಸಿಕೆ ಪಡೆದ ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗೆ ದಾಖಲು.
ಹುಮನಾಬಾದ;ಮಾ.23; ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ 12ರಿಂದ 14 ವರ್ಷದ ಮಕ್ಕಳು ಲಸಿಕೆ ಪಡೆದ ನಂತರ ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಘಟನೆಯೊಂದು ತಾಲೂಕಿ ಜನತಾನಗರ ವಲಯದಲ್ಲಿ ಬುಧವಾರ ಸಂಭವಿಸಿದೆ.
ತಾಲೂಕಿನ ಹುಡಗಿ ವಲಯದ ಜನತಾನಗರ ಗ್ರಾಮದ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿಗಳು ಬುಧವಾರ ಬೆಳಿಗ್ಗೆ ಲಸಿಕ ಪಡೆದುಕೊಂಡಿದ್ದು, ನಂತರ ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಮಕ್ಕಳಿಗೆ ಹೆಚ್ಚಿನ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ. ವಾಂತಿ, ತಲೆನೋವು, ತಲೆ ಸುತ್ತುವುದು ಮಕ್ಕಳಲ್ಲಿ ಕಾಣಿಸಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಗೊಂಡಪ್ಪ ಹಾಗೂ ಆಸ್ಪತ್ರೆಯ ವೈದ್ಯಾಧಿಕಾರಿ ಡಾ। ನಾಗನಾಥ ಹುಲಸೂರೆ ಮಾಹಿತಿ ನೀಡಿದ್ದಾರೆ.

ಶಾಲೆಯ ಒಟ್ಟಾರೆ, 20 ಮಕ್ಕಳಿಗೆ ಕೊರ್ಬೆವ್ಯಾಕ್ಸ್ ಲಸಿಕೆ ನೀಡಲಾಗಿದ್ದು, 12 ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ನಂತರ ಮೊದಲಿಗೆ ಹುಡಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ನಂತರ ಹುಮನಾಬಾದ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶಾಲಾ ಮುಖ್ಯಗುರು ಮಾಹಿತಿ ನೀಡಿದ್ದಾರೆ.
Date: 23-03-2022 : www.kknewsonline.in
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…

















