ಲಾಕ್ ಡೌನ್ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಅನಿವಾರ್ಯ
ಜನರ ಸಮಸ್ಯೆಗೆ ಸ್ಥಳದಲ್ಲಿ ಪರಿಕಾರ ಕಲ್ಪಿಸಿದ ಜಿಲ್ಲಾಧಿಕಾರಿ.

ಬೀದರ: ಅನಾವಶ್ಯಕವಾಗಿ ಜಿಲ್ಲಾಡಳಿತ ಕಚೇರಿ ಸೇರಿದಂತೆ ವಿವಿಧ ಕಚೇರಿಗಳಿಗೆ ಸಾರ್ವಜನಿಕರು ಭೇಟಿನೀಡುವುದುಯಾವುದ ಕುಂಟು ನೆ ಪಹೇಳಿಕೊಂಡು ಲಾಕ್ ಡೌನ್ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಅನಿವಾರ್ಯ ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ ಸಾರ್ವಜನಿಕರಿಗೆ ಎಚ್ಚರಿಸಿದ್ದಾರೆ.
ಸದ್ಯ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಪೂರೈಕೆಗೆ ಯಾವುದೆ ಸಮಸ್ಯೆ ಇಲ್ಲ. ಅರ್ಹರಿಗೆ ಆಹಾರ ಧಾನ್ಯ, ಊಟ ವಿತರಣೆ ಆಗುತ್ತಿದೆ. ಜನರು ಸರ್ಕಾರದ ಲಾಕ್ ಡೌನ್ ಕಡ್ಡಾಯವಾಗಿ ಪಾಲಿಸಬೇಕು. ಯಾವುದೇ ಕುಂಟು ನೆಪಗಳ ಹೇಳಿಕೊಂಡು ರಸ್ತೆಗೆ ಬರಬಾರದು. ಮಹಾಮಾರಿ ಕೊರೊನಾ ಸೋಂಕು ಜನಸಾಮಾನ್ಯರಿಗೆ ತಗಲಬಾರದು ಎಂಬ ನಿಟ್ಟಿನಲ್ಲಿ ಜಿಲ್ಲಾಡಳಿತ ವಿವಿಧ ನಿಯಮಗಳು ಜಾರಿಗೊಳಿಸಿದ್ದು, ಅವುಗಳ ಪಾಲನೆ ಆಗುವಂತೆ ಜನರು ಕೂಡ ಸಹಕಾರ ನೀಡಬೇಕು ಎಂದರು.
ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ: ಜಿಲ್ಲಾಧಿಕಾರಿ ಕಚೇರಿಗೆ ಬಂದ ಜನರ ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ್ ಆಲಿಸಿದರು. ಬೇರೆ ಜಿಲ್ಲೆ, ಬೇರೆ ರಾಜ್ಯಗಳಲ್ಲಿನ ಸಂಬಂಧಿಕರನ್ನು ಕರೆತರುವುದು, ಆಹಾರ ವಿತರಣೆ ಸಮಸ್ಯೆ, ಅಗತ್ಯ ಸೇವೆ ನೀಡಲು ಪಾಸ್ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಜನರು ಅರ್ಜಿಸಲ್ಲಿಸಿ ಅನುಮತಿ ನೀಡುವಂತೆ ಮನವಿ ಮಾಡಿದರು. ಅಗತ್ಯ, ಅವಶ್ಯಕತೆ ಇರುವ ವ್ಯಕ್ತಿಗಳಿಗೆ ಸೀಮಿತ ಪಾಸ್ ವಿತರಣೆ ಮಾಡಲಾಗುತ್ತಿದೆ. ಲಾಕ್ ಡೌನ್ ಸಂದರ್ಭದಲ್ಲಿ ಆಗದ ಕೆಲಸಗಳಿಗೆ ಜನರು ಕಚೇರಿಗಳ ಕಡೆಗೆ ಸಂಚಾರ ಮಾಡಬಾರದು. ಅಲ್ಲದೆ ನಗರದಲ್ಲಿ ಅನಾವಶ್ಯಕವಾಗಿ ಯಾರು ಸಂಚಾರ ಮಾಡಬಾರದು ಎಂದು ಎಚ್ಚರಿಸಿದರು.
ಜಿಲ್ಲಾಧಿಕಾರಿ ಕಾರ್ಯಕ್ಕೆ ಮೆಚ್ಚಿಗೆ: ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿ ಗಮನಕ್ಕೆ ತಂದು ಪರಿಹಾರ ಪಡೆದುಕೊಂಡ ಅನೇಕ ಜನರು ಜಿಲ್ಲಾಧಿಕಾರಿ ಕೆಲಸಕ್ಕೆ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಸಮಸ್ಯೆಗಳಿಗೆ ಸ್ಥಳದಲ್ಲಿ ಪರಿಹಾರ ಕಲ್ಪಿಸಿರುವುದು ಸಂತಸ ತಂದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Date:13-04-2020
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















