ಲ್ಯಾಬ್ಟೆಸ್ಟ್ಗೆ ಪ್ರತಿದಿನ 300 ಸ್ಯಾಂಪಲ್ ಕಳುಹಿಸಲು ಸೂಚನೆ
ಬೀದರ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏ.16ರಂದು ನಡೆದ ವಿಡಿಯೋ ಸಂವಾದದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಬೀದರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಇ.ವಿ.ರಮಣರೆಡ್ಡಿ ಅವರು ಗಂಟಲು ದ್ರವ ಮತ್ತು ರಕ್ತದ ಮಾದರಿ ಪರೀಕ್ಷೆಯ ಬಗ್ಗೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲೆಯಲ್ಲಿ ಇದುವರೆಗೆ 642 ಸ್ಯಾಂಪಲ್ ಟೆಸ್ಟ್ ಆಗಿದೆ. ಇನ್ನೂ 1100 ಸ್ಯಾಂಪಲ್ ಟೆಸ್ಟ್ ಮಾಡುವುದು ಬಾಕಿಯಿದೆ ಎಂದು ಜಿಲ್ಲಾ ಸರ್ವೆಲೆನ್ಸ್ ಆಫೀಸರ್ ಡಾ.ಕೃಷ್ಣಾ ರೆಡ್ಡಿ ಅವರು ಮಾಹಿತಿ ನೀಡಿದರು.
ತಾಲೂಕು ಅಧಿಕಾರಿಗಳು ಮಾಹಿತಿ ನೀಡಲಿ: ಈ ವೇಳೆ ಮಾತನಾಡಿದ ಕಾರ್ಯದರ್ಶಿಗಳು, ತಾಲೂಕು ವೈದ್ಯಾಧಿಕಾರಿಗಳು ಕೂಡ ಚುರುಕಾಗಿ ಕೆಲಸ ಮಾಡಬೇಕು. ಜಿಲ್ಲಾ ವೈದ್ಯಾಧಿಕಾರಿಗಳ ಜೊತೆಗೆ ನಿತ್ಯ ಮಾತನಾಡಿ ಮಾಹಿತಿ ರವಾನಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷö್ಯ ಮಾಡಬಾರದು ಎಂದು ಸೂಚಿಸಿದರು. ಎಲ್ಲ ತಾಲೂಕು ವೈದ್ಯಾಧಿಕಾರಿಗಳಿಂದ ಕಾಲಕಾಲಕ್ಕೆ ಮಾಹಿತಿ ಪಡೆಯಲು ಈಗಾಗಲೇ ನೋಡೆಲ್ ಅಧಿಕಾರಿಯನ್ನು ನೇಮಿಸಿ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಡಿಎಚ್ಓ ಅವರು ಪ್ರತಿಕ್ರಿಯಿಸಿದರು.
ಈ ವೇಳೆ ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್.ಮಹಾದೇವ್ ಅವರು ಮಾತನಾಡಿ, ನಾಲ್ಕು ವೈದ್ಯರಿರುವ ತಂಡ ರಚಿಸಿ, ಸ್ಯಾಂಪಲ್ ಟೆಸ್ಟ್ ಕಾರ್ಯ ತೀವ್ರಗೊಳಿಸಬೇಕು. ಪ್ರತಿ ದಿನ 300 ಸ್ಯಾಂಪಲ್ಗಳನ್ನು ಬೆಂಗಳೂರಿಗೆ ಕಳುಹಿಸುವ ಕಾರ್ಯ ಆರಂಭವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ವಿ.ಜಿ.ರೆಡ್ಡಿ ಅವರಿಗೆ ಸೂಚಿಸಿದರು. ಈ ವೇಳೆ ಬ್ರಿಮ್ಸ್ ನಿರ್ದೇಶಕರಾದ ಶಿವಕುಮಾರ ಹಾಗೂ ಇತರರು ಇದ್ದರು.
Date: 17-04-2020
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…