ವಿಕಲಚೇತನರ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿ: ಡಾ|ಹೆಚ್.ಆರ್.ಮಹಾದೇವ
ಬೀದರ: ವಿಕಲಚೇತನರು ಸರ್ಕಾರದಿಂದ ಇರುವ ಸೌಲಭ್ಯಗಳ ಸದುಪಯೋಗ ಪಡೆಯಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ಹೆಚ್.ಆರ್.ಮಹಾದೇವ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳು ಹಾಗೂ ಎಮ್.ಆರ್.ಡಬ್ಲೂö್ಯ ಮತ್ತು ವಿ.ಆರ್. ಡಬ್ಲೂö್ಯ ಇವರ ಸಂಯುಕ್ತಾಶ್ರಯದಲ್ಲಿ ಡಿ.3ರಂದು ನಗರದ ಜಿಲ್ಲಾ ರಂಗ ಮಂದಿರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ವಿಲಚೇತನರ ಅಂಗವೈಕಲ್ಯವನ್ನು ಕಡೆಗಣಿಸಿ, ಅವರಲ್ಲಿ ಸೂಪ್ತವಾಗಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕಾಗಿದೆ. ವಿಕಲಚೇತನರು ಸಲ್ಲಿಸುವ ಅಹವಾಲುಗಳನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಅವರ ಸಮಸ್ಯೆಗಳನ್ನು ನಿವಾರಿಸಲು ಪ್ರಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗವಾರ ಅವರು ಮಾತನಾಡಿ, ವಿಕಲಚೇತನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ನೆರವಾಗುವುದು ಸೇರಿದಂತೆ ವಿವಿಧ ರೀತಿಯಿಂದ ಸಹಾಯ ಹಸ್ತ ನೀಡಲು ಸಾಕಷ್ಟು ಯೋಜನೆಗಳಿಗೆ ಅವುಗಳನ್ನು ಸರಿಯಾಗಿ ಅನುಷ್ಠಾನಗೊಳಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಕೆ ಅವರು ಪ್ರಸ್ತಾವಿಕ ಮಾತನಾಡಿ, ಬೀದರ ಜಿಲ್ಲೆಯಲ್ಲಿರುವ ವಿಕಲಚೇತನರಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ತಲುಪಿಲು ಇಲಾಖೆ ಕಾರ್ಯಪ್ರವೃತ್ತವಾಗಿದೆ. ವಿದ್ಯಾರ್ಥಿವೇತನ, ವಿವಾಹ ಪ್ರೋತ್ಸಾಹ ಧನ, ಲ್ಯಾಪ್ಟಾಪ್ ವಿತರಣೆ, ವಿಕಲಚೇತನರು ಕಾಲೇಜು ಅಥವಾ ಉದ್ಯೋಗ ಸ್ಥಳಕ್ಕೆ ಸುಲಭವಾಗಿ ಹೋಗಿ ಬರಲು ಅನುಕೂಲವಾಗಲು ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಲಾಗುತ್ತಿದೆ. ಇವುಗಳ ಸದುಪಯೋಗ ಪಡೆಯಬೇಕು ಎಂದು ಹೇಳಿದರು.
ಬೀದರ ಹಾಗೂ ಬಸವಕಲ್ಯಾಣ ಸಹಾಯಕ ಅಯುಕ್ತರಾದ ಅಕ್ಷಯ ಶ್ರೀಧರ್, ಭಂವರ್ ಸಿಂಗ್ ಮೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ಸೂರ್ಯಕಾಂತ ಬಿರಾದಾರ್, ಮುಖಂಡರಾದ ಅನಿಲ್ ಬೆಲ್ದಾರ್, ರಾಜು ಕಡ್ಯಾಳ, ಸಂತೋಷ ಭಾಲ್ಕಿ, ದಾಸ ಸೂರ್ಯವಂಶಿ, ಇತರರು ಉಪಸ್ಥಿತರಿದ್ದರು.
Date: 03-12-2019 – Time:6:45
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …
















