ವಿಜಯಪುರ ಪಾಲಿಕೆ ಸಿಬ್ಬಂದಿಗಳ ಮೇಲೆ ಹಲ್ಲೆ : ಹುಮನಾವಾದನಲ್ಲಿ ಪ್ರತಿಭಟನೆ
ಹುಮನಾಬಾದ: ಡಿಸೆಂಬರ್ 22: ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಆರೊಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ಹುಮನಾಬಾದ ಘಟಕದಿಂದ ಬುಧವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಪುರಸಭೆ ಆವರಣದಿಂದ ಆರಂಭಗೊಂಡ ಪ್ರತಿಭಟನೆಯು ಪಟ್ಟಣದ ಮುಖ್ಯರಸ್ತೆಯ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದ ಸಿಬ್ಬಂದಿಗಳು ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ವಿವಿಧಡೆ ಅಧಿಕಾರಿಗಳು ಹಾಗೂ ಸಿಬಂದಿಗಳ ಮೇಲೆ ಹಲ್ಲೆ ನಡೆಸುವ ಘಟನೆಗಳು ನಡೆಯುತ್ತಿದ್ದು, ಹಲ್ಲೆ ಮಾಡುವ ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡಿದಲ್ಲಿ ಮಾತ್ರ ಘಟನೆಗಳು ಮರುಕಳಿಸುವುದಿಲ್ಲ ಎಂದು ಪದಾಧಿಕಾರಿಗಳು ಹೇಳಿದರು.
ಈ ಸಂದರ್ಭದಲ್ಲಿ ಪುರಸಭರ ಮುಖ್ಯಾಧಿಕಾರಿ ಶೇಖ ಚಂದ ಪಟೇಲ್, ಸಂಘದ ಅಧ್ಯಕ್ಷ ಸೈಯದ್ ಖಾನ, ಉಪಾಧ್ಯಕ್ಷ ಬಸವರಾಜ, ಕಾರ್ಯದರ್ಶಿ ದತ್ತು ಅವರಗೆ, ಜಾವೀದ್ ಹುಸೇನ್,ಶಾಮದಾಸ, ಸಲ್ಲಿಮ್ ಮಿಯ್ಯಾ, ಈಶ್ವರ ತರಲಂಗೆ, ಬಸವರಾಜ ಸೇರಿದಂತೆ ಅನೇಕ ಸಿಬ್ಬಂದಿಗಳು ಇದ್ದರು.
Date: 22-12-2021
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…


















