Home ನಿಮ್ಮ ಜಿಲ್ಲೆ ಬೀದರ ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳೆಯಬೇಕು.

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳೆಯಬೇಕು.

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳೆಯಬೇಕು

ಬಸವಕಲ್ಯಾಣ: ವಿದ್ಯಾರ್ಥಿಗಳು ಉತ್ತಮ ಅಂಕಗಳಿಸುವ ಜೊತೆಯಲ್ಲಿ ಉತ್ತಮ ಅಭ್ಯಾಸಗಳು ರೂಢಿಸಿಕೊಳ್ಳಬೇಕು ಎಂದು ಸಹಾಯಕ ಆಯುಕ್ತ ಭಂವರ್‌ಸಿಂಗ್ ಮೀನಾ ಹೇಳಿದರು.

ನಗರದ ಶಾಂತಿನಿಕೇತನ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ಅಂಕ ಗಳಿಸುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಉತ್ತಮ ಆರೋಗ್ಯಕ್ಕೂ ನೀಡಬೇಕು. ಓದಿನೊಂದಿಗೆ ಇತರೆ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಈ ಸಂಸ್ಥೆಯ ಎಲ್ಲಾ ಶಿಕ್ಷಕರ ಶ್ರಮದಿಂದ ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಂಡಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಹೇಳಿದರು.

ಸಂಸ್ಥೆಯ ಉಪಾಧ್ಯಕ್ಷ ಹಾಗೂ ಪಿಆರ್‌ಇ ಅಧಿಕಾರಿ ರಾಜಕುಮಾರ ಸಾಹುಕಾರ ಮಾತನಾಡಿ, ಪ್ರತಿಯೊಂದು ಮಗುವಿನಲ್ಲಿ ಒಂದಲ್ಲಾ ಒಂದು ಪ್ರತಿಭೆ ಅಡಗಿರುತ್ತದೆ. ಶಿಕ್ಷಕರು ಅದನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕು. ಇದರಿಂದ ವಿದ್ಯಾರ್ಥಿಗಳು ತಮ್ಮ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪ್ರಾ.ಶಾ.ಮುಖ್ಯಗುರು ಶಿವರಾಜ ಖೇಲೆ, ಪ್ರೌಢ ಶಾಲೆಯ ಮುಖ್ಯಗುರು ಚೆನ್ನವೀರ ಕೆ.ಬಿರಾದಾರ್, ಸೇರಿದಂತೆ ಮತ್ತಿತರರು ಇದ್ದರು. ಶಶಿಕಾಂತ ಎಸ್.ಮಂಠಾಳೆ ನಿರೂಪಿಸಿದರು.ಅಮರ ಜಿ.ರಾಜಪೂತ ವಂದಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

Date:26-08-2020   www.kknewsonline.in

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…