ವಿವಿಧಡೆ ತಹಸಿಲ್ದಾರ್ ದಾಳಿ
ಪೆಟ್ರೋಲ್ ಡೀಸೆಲ್ ಸಾರಾಯಿ ಜಪ್ತಿ
ಹುಮನಾಬಾದ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಕ್ರಮ ಪೆಟ್ರೊಲಿಯಂ ಉತ್ಪನ ಹಾಗೂ ಕಿರಾಣಿ ಅಂಗಡಿಯಲ್ಲಿ ಸಾರಾಯಿ ಮಾರಾಟ ಮಾಡುತ್ತಿರು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ತಹಸಿಲ್ದಾರ ನಾಗಯ್ಯಾ ಹಿರೇಮಠ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಿ
ರಾಮ ಮಂದಿರ ವಿವಾದದ ಮಹತ್ವದ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶನಿವಾರ ಕಲಂ 144 ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ವಿವಿಧ ಗ್ರಾಮಗಳಲ್ಲಿ ರಸ್ತೆ ಪಕ್ಕದಲ್ಲಿ ಪೆಟ್ರೋಲ್-ಡೀಸೆಲ್ ಸಾರಾಯಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ. ತಾಲೂಕಿನ ಅಲ್ಲೂರ, ನಿಂಬೂರ, ಮರಖಲ್, ಸೀತಾಳಗೇರಾ, ಮದರಗಾಂವ ಸೇರಿದಂತೆ ವಿವಿಧಡೆ ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.
ನಿಷೇಧಾಜ್ಞೆ ಜಾರಿಯಲ್ಲಿರುವ ಸಂದರ್ಭದಲ್ಲಿ ರಸ್ತೆ ಪಕ್ಕದಲ್ಲಿ ಪೆಟ್ರೊಲಿಯಂ ಉತ್ಪನಗಳಿಂದ ಅವಘಡ ಸಂಭವಿಸಬಹುದು ಎಂಬ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ಜಪ್ತಿಮಾಡಲಾಗಿದೆ ಆದರೆ ಈ ಕುರಿತು ಯಾವುದೆ ಪ್ರಕರಣ ದಾಖಲಾಗಿಲ್ಲ ಎಂದು ತಹಸಿಲ್ದಾರ ನಾಗಯ್ಯಾ ಹಿರೇಮಠ ತಿಳಿಸಿದ್ದಾರೆ.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…


















