Home ನಿಮ್ಮ ಜಿಲ್ಲೆ ಬೀದರ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ರಾಮಚಂದ್ರ ಆರ್ ದಿಢೀರನೆ ಭೇಟಿ.

ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ರಾಮಚಂದ್ರ ಆರ್ ದಿಢೀರನೆ ಭೇಟಿ.

ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ದಿಢೀರನೆ ಭೇಟಿ.

ತಾಲೂಕು ಮಟ್ಟದಲ್ಲಿ ಕೋವಿಡ್ ಆಸ್ಪತ್ರೆ ಚಿಂತನೆ – ಆಸ್ಪತ್ರೆಗಳ ವ್ಯವಸ್ಥೆ ಕುರಿತು ಪರಿಶೀಲನೆ.

ಬೀದರ: ಜಿಲ್ಲೆಯಲ್ಲಿ ಕೋರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ನಗರದ ಬ್ರಿಮ್ಸ್ ಆಸ್ಪತ್ರೆ ಹಾಗೂ ಹುಮನಾಬಾದ ತಾಲೂಕು ಆಸ್ಪತ್ರೆಗೆ ಹಠಾತ್ತನೆ ಭೇಟಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯಲ್ಲಿ ಬಳಕೆ ಆಗದ ಕೊಠಡಿಗಳು, ಬೇಡ್ ಗಳ ವ್ಯವಸ್ಥೆಗಳು, ಐಸಿಯು ಘಟಕದಲ್ಲಿನ ವ್ಯವಸ್ಥೆ ಹಾಗೂ ವೆಂಟಲೇಟರ್ ಗಳ ಕುರಿತು ಸಮಗ್ರ ಮಾಹಿತಿ ಪಡೆದರು. ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಕಿಡಿಕಾರಿದರು. ಆಯಾ ಇಲಾಖೆ ಅಧಿಕಾರಿಗಳು ಸೂಕ್ತ ಸಮಯಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದರು ವ್ಯವಸ್ಥೆಗಳು ಸೂಕ್ತ ಇರುತ್ತಿತ್ತು. ಸಂಬಂಧಿಸಿದ ಅಧಿಕಾರಿಗಳು ತಮ್ಮ ಕರ್ತವ್ಯ ಸೂಕ್ತವಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ ಅವ್ಯವಸ್ಥೆಗಳು ಎದ್ದುಕಾಣುತ್ತಿವೆ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

ನಂತರ ಹುಮನಾಬಾದ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಭೇಟಿನೀಡಿದ ಅವರು, ಆಸ್ಪತ್ರೆಯಲ್ಲಿ ಎಲ್ಲಾ ಕಡೆಗಳಲ್ಲಿ ಸಂಚರಿಸಿ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದರು. ಖಾಲಿ ಇರುವ ಕೊಠಡಿಗಳು, ಬೇಡ್ ಹಾಗೂ ಇತರೆ ಅಗತ್ಯ ವ್ಯವಸ್ಥೆಗಳ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು.ಆಸ್ಪತ್ರೆಯಲ್ಲಿನ ಅಸ್ವಚ್ಛತೆ ಕುರಿತು ಹಾಗೂ ಖಾಲಿ ಕೊಠಡಿಗಳು ಕಂಡು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಆಸ್ಪತ್ರೆಯಲ್ಲಿ ಬೇಡ್ ಹಾಗೂ ಕೊಠಡಿಗಳ ವ್ಯವಸ್ಥೆ ಇರುವ ಹಿನ್ನೆಲೆಯಲ್ಲಿ ಇಲ್ಲಿ ಕೋವಿಡ್-19 ಚಿಕಿತ್ಸಾ ಆಸ್ಪತ್ರೆ ಶುರುಮಾಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಳ್ಳಿ ಎಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ‌ ಅಪಾರ‌ ಜಿಲ್ಲಾಧಿಕಾರಿ ಡಾ|.ರುದ್ರೇಶ್ ಘಾಳಿ, ಜಿಲ್ಲಾ ಆರೋಗ್ಯಾಧಿಕಾಖರಿ ಡಾ|.ವಿ.ಜಿ ರೆಡ್ಡಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…