Home ನಿಮ್ಮ ಜಿಲ್ಲೆ ಬೀದರ ಸರ್ಕಾರಿ ನೌಕರರು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು: ಸುಭಾಷ್ ಕಲ್ಲೂರ್

ಸರ್ಕಾರಿ ನೌಕರರು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು: ಸುಭಾಷ್ ಕಲ್ಲೂರ್

ಸರ್ಕಾರಿ ನೌಕರರು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು: ಸುಭಾಷ್ ಕಲ್ಲೂರ್

ಸೇವಾ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದೇನೆ  ರಾಚಪ್ಪಾ ಪಾಟೀಲ.

ಹುಮನಾಬಾದ: ಸರ್ಕಾರಿ ನೌಕರಿ ಪಡೆದ ಅಧಿಕಾರಿಗಳು ಸಮಾಜದೊಂದಿಗೆ ಬೆರೆತು ಉತ್ತಮ ಕೆಲಸ ಮಾಡಿದರೆ ಜನಮಾನಸದಲ್ಲಿ ಉಳಿಯುತ್ತಾರೆ ಎಂದು ಮಾಜಿ ಶಾಸಕ ಸುಭಾಷ ಕಲ್ಲೂರ್ ಅಭಿಪ್ರಾಯ ಪಟ್ಟರು.

ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಏರ್ಪಡಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ರಾಚಪ್ಪ ಪಾಟೀಲ ಅವರ ವಯೋನಿವೃತ್ತಿ ಸಮಾರಂಭದಲ್ಲಿ ಅವರು ಮಾತನಾಡಿದರು.

ಉತ್ತಮ ಕೆಲಸಗಳು ಸಮಾಜದಲ್ಲಿ ಉಳಿಯುತ್ತವೆ. ಗುಣಮಟ್ಟದ ಕಾಮಗಾರಿ ಮಾಡಿದರೆ ಆ ಅಧಿಕಾರಿಯ ಹೆಸರು ಕೊನೆಯ ವರೆಗೂ ಉಳಿದುಕೊಳ್ಳುತ್ತದೆ. ಅಧಿಕಾರಿಗಳು ಯಾವುದೇ ಹೊಂದಾಣಿಕೆಗೆ ಒಳಗಾದೆ ಕೆಲಸ ನಿರ್ವಹಿಸಿದರೆ ಮಾತ್ರ ಗುಣಮಟ್ಟದ ಕಾಮಗಾರಿ ನಡೆಯುತ್ತದೆ. ಇಂದಿನ ದಿನಗಳಲ್ಲಿ ಬಹುತೇಕ ಗುತ್ತಿಗೆದಾರರು ಕಡಿಮೆ ದರದಲ್ಲಿ ಟೆಂಡರ್ ಪಡೆದುಕೊಂಡು ಕೆಲಸ ಮಾಡುತ್ತಿದ್ದಾರೆ
ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಕಾಮಗಾರಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಅವರು, ಗುಣಮಟ್ಟದ ಕಾಮಗಾರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಹುಮನಾಬಾದ ಜಿಲ್ಲೆಯಲ್ಲಿಯೇ ವಿಭಿನ್ನವಾಗಿದೆ. ಚುನಾವಣೆಯಲ್ಲಿ ರಾಜಕೀಯ ಮಾಡುತ್ತೇವೆ ಆದರೆ, ಚುನಾವಣೆಯ ನಂತರ ಅಭಿವೃದ್ಧಿಗೆ ಮಹತ್ವ ನೀಡುವ ಕ್ಷೇತ್ರ ಇದಾಗಿದೆ. ಇಲ್ಲಿ ಕಾಂಗ್ರೇಸ್ ಬಿಜೆಪಿ ಕಿತ್ತಾಟ ಕೇವಲ ಚುನಾವಣೆಗೆ ಮಾತ್ರ ಸೀಮಿತ ಎಂಬುವುದು ತಿಳಿದು ಎಲ್ಲರೂ ಕೆಲಸ ಮಾಡಬೇಕು ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಚಪ್ಪ ಪಾಟೀಲ, ಸೇವಾ ಅವಧಿಯಲ್ಲಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉತ್ತಮ ಸಹಕಾರ ನೀಡಿದ್ದಾರೆ. ಈ ಬಾರಿ ಕುಡಿಯುವ ನೀರಿನ ಸಮಸ್ಯೆ ಆಗದೆ ಇರುವುದಕ್ಕೆ ಎಲ್ಲಾ ಪಿಡಿಒಗಳ ಸಹಕಾರವೆ ಮುಖ್ಯ ಎಂದರು. ಉತ್ತಮ ಕಾರ್ಯ ಹಿನ್ನೆಲೆಯಲ್ಲಿ ಯಾವುದೇ ಕಡೆ ಕುಡಿಯುವ ನೀರಿನ ಸಮಸ್ಯೆ ಆಗಿಲ್ಲ ಎಂದರು.

ತಾಲೂಕು ಪಂಚಾಯತ ಇಓ ವೈಜಿನಾಥ ಫುಲೇ, ಎಇಇ ವಾಮನರಾವ, ನಾಗಶೆಟ್ಟಿ ಡುಮಣಿ, ಡಾ। ಗೊವಿಂದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

 

 

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…