ಸರ್ಕಾರಿ ಬಸ್ – ಕಂಟೇನರ್ ಮಧ್ಯೆ ಡಿಕ್ಕಿ
ಹುಮನಾಬಾದ-ನ.12: ಪಟ್ಟಣದ ಹೊರವಲಯದ ಕಲ್ಬುರ್ಗಿ ರಸ್ತೆಯಲ್ಲಿ ಶುಕ್ರವಾರ ಸಂಜೆ ಸರ್ಕಾರಿ ಬಸ್ ಹಾಗೂ ಕಂಟೇನರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಭಾರಿ ಅನಾಹುತವೊಂದು ತಪ್ಪಿದೆ.
ಕಂಟೇನರ್ ವಾಹನದ ಮುಂದಿನ ಟೈಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಐದು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹುಮನಾಬಾದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಬೀದರ ದಿಂದ ಕಲಬುರಗಿ ತೆರಳುತ್ತಿದ್ದ ಬಸ್ಸಿನಲ್ಲಿ ಸುಮಾರು 40ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣ ಬೆಳೆಸಿದರು. ಭಾರಿ ಅಪಘಾತ ಸಂಭವಿಸಿದರೂ ಕೂಡ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂಬುದೇ ವಿಶೇಷ.
ಮಾನವೀಯತೆ ಮೆರೆದ ಪೊಲೀಸರು: ಅಪಘಾತ ಸಂಭವಿಸುತ್ತಿದ್ದಂತೆ ಬೀದರ್ ಕಲ್ಬುರ್ಗಿ ಹೆದ್ದಾರಿಯಲ್ಲಿ ಎರೆಡು ವಾಹನಗಳ ಗಾಜುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಬೇರೆ ಅಪಘಾತ ಸಂಭವಿಸದಂತೆ ಎಚ್ಚರಿಕೆ ವಹಿಸಿದ ಸಿಪಿಐ ಮಲ್ಲಿಕಾರ್ಜುನ್, ಪಿಎಸ್ಐ ರವಿಕುಮಾರ ನಾಯ್ಕೋಡಿ, ಸಂಚಾರ ಪಿಎಸ್ಐ ಬಸವರಾಜ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ಖುದ್ದು ರಸ್ತೆಯಲ್ಲಿ ಬಿದ್ದ ಗಾಜುಗಳನ್ನು ತೆರುವುಗೊಳಿಸಿ ರಸ್ತೆ ಸ್ವಚ್ಛ ಮಾಡಿ ಮಾನವೀಯತೆ ಮೆರೆದಿದ್ದರು. ಘಟನಾ ಸ್ಥಳಕ್ಕೆ ಶಾಸಕ ರಾಜಶೇಖರ ಪಾಟೀಲ ಭೇಟಿನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕಾರ ನೀಡಿ ಘಟನೆಯ ಮಾಹಿತಿ ಪಡೆದುಕೊಂಡರು.
ಘಟನೆಯ ಕುರಿತು ಹುಮನಾಬಾದ ಪೊಲೀಸ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
video https://youtube.com/shorts/2_rFh3D3sfw?feature=share
Date: 12-11-2021
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















