Home Uncategorized ಸಹಾಯ ಮಾಡಲಿಚ್ಚಿಸುವವರ ಹೆಸರು ನೋಂದಣಿಗೆ ಅವಕಾಶ 

ಸಹಾಯ ಮಾಡಲಿಚ್ಚಿಸುವವರ ಹೆಸರು ನೋಂದಣಿಗೆ ಅವಕಾಶ 

ಬೀದರ- ಕೋರೋನಾ ವೈರಸ್ ಹಿನ್ನೆಲೆಯಲ್ಲಿ ಆಹಾರ ಮತ್ತು ಧಾನ್ಯದ ಮೂಲಕ ಜನತೆಗೆ ಸಹಾಯ ಮಾಡಲು ಇಚ್ಚಿಸುವವರ ಹೆಸರು ನೋಂದಣಿಗೆ ಜಿಲ್ಲಾಳಿಡತ ಅವಕಾಶ ಕಲ್ಪಿಸಿದೆ. ಅಂತವರು ಬೀದರ ನಗರದಲ್ಲಿ ಬೀದರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತ್ತು ತಾಲೂಕು ಕೇಂದ್ರಗಳಲ್ಲಿ ಆಯಾ ತಾಲೂಕುಗಳ ತಹಸೀಲ್ದಾರ ಕಚೇರಿಗಳಿಗೆ ಭೇಟಿ ನೀಡಿ, ಹೆಸರು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರ ಕಚೇರಿ ಪ್ರಕಟಣೆ ತಿಳಿಸಿದೆ.

ಸ್ವಯಂ ಸೇವಕರಾಗಿ ಹೆಸರು ನೋಂದಣಿಗೆ ಅವಕಾಶ

ಬೀದರ- ಕೋರೋನಾ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲು
ಇಚ್ಚಿಸುವವರಿಗೆ ತಮ್ಮ ಹೆಸರು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ಅಂತವರು ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಇಲ್ಲವೇ ಆಯಾ ತಹಸೀಲ್ ಕಚೇರಿಗೆ ಭೇಟಿ ನೀಡಿ ತಮ್ಮ ಹೆಸರು ನೋಂದಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರ ಕಚೇರಿ ಪ್ರಕಟಣೆ ತಿಳಿಸಿದೆ.

 

Date: 29-03-2020

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…