ಸುಳ್ಳುಸುದ್ದಿ ನಂಬಬೇಡಿ-SP ಟಿ.ಶ್ರೀಧರ್
ಬೀದರ ಬಂದ್ ಇಲ್ಲ...
ಬೀದರ: ಪೌರತ್ವ ತಿದ್ದುಪಡಿ ಕಾಯ್ದೆ, 2019 ಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆಯಲ್ಲಿ ದಿನಾಂಕ 23.12.2019 ರಂದು ಬಂದ್ರ ಇರುವುದಿಲ್ಲ ಎಂದು ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ, 2019 ಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆಯಲ್ಲಿ ದಿನಾಂಕ 23.12.2019 ರಂದು ಬಂದ್ ಇರುವುದಾಗಿ ಸುಳ್ಳು ಸುದ್ದಿಗಳನ್ನು ಕೆಲವು ದುಷ್ಟ ಶಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿರುವುದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದ್ದು, ಈಗಾಗಲೇ ಇಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಸುಳ್ಳು ಸುದ್ದಿಗಳಿಗೆ ನಾಗರಿಕ ಸಾರ್ವಜನಿಕರು ಕಿವಿಗೊಡಬಾರದು ಮತ್ತು ಈ ರೀತಿಯ ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಯಾವುದೇ ಮೊಬೈಲ್ ನಂಬರ್, ಸಾಮಾಜಿಕಜಾಲತಾಣ ವಿವರ ಮತ್ತು ವ್ಯಕ್ತಿಯ ಹೆಸರನ್ನು ಪೋಲಿಸ್ ಇಲಾಖೆಗೆ ನೀಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Date: 22-12-2019 Time: 5:56PM
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …
















